ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂದು ಸಭಾಪತಿಗೆ ದೂರು ಸಲ್ಲಿಕೆಯಾಗಿದೆ.
ಎನ್. ರವಿಕುಮಾರ್ ವಿರುದ್ದ ಮೇಲ್ಮನೆ ಸಭಾಪತಿಗೆ ದೂರು ಸಲ್ಲಿಸಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಸೇರಿದಂತೆ ಹಲವು ಮುಖಂಡರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ಸಲ್ಲಿಸಿದ್ದಾರೆ. ಮನವಿಯಲ್ಲಿ ಎನ್. ರವಿಕುಮಾರ್ ಅಮಾನತು ಮಾಡಬೇಕೆಂದು ಆಗ್ರಹಿಸಲಾಗಿದೆ.


















