ತುಮಕೂರು: ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಅವರ ಅಭಿಮಾನಿಗಳು ಇಂದು ಬುಧವಾರ ಶಿರಾ ನಗರದ ಐಬಿ ಸರ್ಕಲ್ ನಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡಿಸಿದ್ದಾರೆ.
ಐದು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕೆ.ಎನ್.ರಾಜಣ್ಣ ಪರ ಪ್ರತಿಭಟನೆ ನಡೆಸುವ ಮೂಲಕ ಮತ್ತೆ ಮಂತ್ರಿ ಸ್ಥಾನ ಕೊಡುವಂತೆ ಆಗ್ರಹಸಿದ್ದಾರೆ.