ಮೈಸೂರು: ಪಕ್ಷದಲ್ಲಿನ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿರುವ ಯತ್ನಾಳ್ ರನ್ನು ಪಕ್ಷದಿಂದಲೇ ಉಚ್ಛಾಟಿಸುವಂತೆ ವಿಜಯೇಂದ್ರ ಪರ ಬಣದ ನಾಯಕರು ಆಗ್ರಹಿಸಿದ್ದಾರೆ.
ಯತ್ನಾಳ್ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ, ಅವರದ್ದು ಮುಖವಾಡದ ಹಿಂದುತ್ವ ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು, ವಿಜಯೇಂದ್ರ ಬಣದ ನಾಯಕರು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯತ್ನಾಳ್ ಕಾರಣ ಎಂದಿದ್ದಾರೆ. ‘‘ಮಿಸ್ಟರ್ ಇಲಿ, ನಿನ್ನ ಆಟ ನಡೆಯುವುದಿಲ್ಲ., ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಫಿಕ್ಸಿಂಗ್ ಮಾಡಿ, ಬಿಜೆಪಿ ಸೋಲಿಸಿದೆ. ಯತ್ನಾಳ್ ಹಿಂದುತ್ವದ ಹುಲಿ ಅಲ್ಲ, ಇಲಿ ಎಂದು ಲೇವಡಿ ಮಾಡಿದ್ದಾರೆ.