ವಿಜಯನಗರ ಜಿಲ್ಲೆಯ ಹೊಸಪೇಟೆಯ ಆನಂತಶಯನಗುಡಿ ಬಳಿ ನೂತನವಾಗಿ ನಿರ್ಮಿಸಲಾದ ರೈಲ್ವೆ ಮೇಲ್ ಸೇತುವೆಗೆ ಶ್ರೀಕೃಷ್ಣ ದೇವರಾಯ ಮೇಲ್ಸೇತುವೆ ಹಾಗೂ ಅದರ ಬಳಿಯ ಜಾಗಕ್ಕೆ ಭುವನೇಶ್ವರಿ ವೃತ್ತ ಎಂದು ನಾಮಕರಣ ಮಾಡುವಂತೆ ವಿವಿಧ ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಜೊತೆಗೆ ನವೆಂಬರ್ 1 ರಂದು ನಗರದ ಪ್ರಮುಖ ಸರ್ಕಲ್ಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿ ವೈಭವದಿಂದ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಆಗ್ರಹಿಸಲಾಗಿದೆ.
ಇದೇ ವಿಚಾರವಾಗಿ ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಡಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿವೆ.


















