ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ 3,200ಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ.

ಅಷ್ಟಲ್ಲದೆ, ರಾಜ್ಯದ ಪ್ರಕರಣಗಳ ಲೆಕ್ಕ ಒಂದು ಕಡೆಯಾದರೆ, ದಿನನಿತ್ಯ ಏರಿಕೆಯಾಗುತ್ತಿರುವ ಡೆಂಘಿ ಪ್ರಕರಣಗಳ ಸಂಖ್ಯೆ ಜನರನ್ನು ಬೆಚ್ಚಿ ಬೀಳಿಸುವಂತಿದೆ.

ಇಲ್ಲಿಯವರಗೂ ರಾಜ್ಯದಲ್ಲಿ 3278 ಡೆಂಘಿ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1772 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲೆಡೆ 1506 ಡೆಂಘಿ ಪ್ರಕರಣಗಳು ವರದಿಯಾಗಿವೆ. ಆದರೆ, ಇಲ್ಲಿಯವರೆಗೂ ಯಾವುದೇ ಸಾವು ಸಂಭವಿಸಿಲ್ಲ ಎನ್ನುವುದೇ ನಿಟ್ಟುಸಿರು ಬಿಡುವಂತಹ ಸಂಗತಿ.