ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಿಸಲಾಗುತ್ತಿದೆ ಎಂಬ ದೂರನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕರ್ನಾಟಕದಲ್ಲಿ ಕನ್ನಡಿಗರೇ ಸ್ವಾಭಿಮಾನ ಎಂದು ಪ್ರತಿಪಾದಿಸಿದ್ದು, ಉದ್ಯೋಗ ನಿರಾಕರಿಸುವ ಕಂಪನಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
ನಮ್ಮ ನೆಲದ ಯುವಕ-ಯುವತಿಯರಿಗೆ ಉದ್ಯೋಗ ಸಿಗುವುದು ಅವರ ಹಕ್ಕಾಗಿದೆ. ಈ ಅವಕಾಶವನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕನ್ನಡಿಗರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು ಕಂಡುಬಂದರೆ ಅಂತಹ ಕಂಪನಿಗಳ ವಿರುದ್ಧ ಸೂಕ್ತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.



















