ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲೇ ಇರುವ ಬಾಹ್ಯಾಕಾಶ ಇಲಾಖೆಯಲ್ಲಿ ಖಾಲಿ ಇರುವ 60 ಹುದ್ದೆಗಳ ನೇಮಕಾತಿಗಾಗಿ (Department of Space Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯುಟಿ ಸೆಕ್ರೆಟರಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿಯ ಕುರಿತು ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬಾಹ್ಯಾಕಾಶ ಇಲಾಖೆ
ಒಟ್ಟು ಹುದ್ದೆಗಳು: 60
ಹುದ್ದೆಗಳ ಹೆಸರು: ಡೆಪ್ಯುಟಿ ಸೆಕ್ರೆಟರಿ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 8
ಉದ್ಯೋಗ ಸ್ಥಳ: ಬೆಂಗಳೂರು
ಅಕೌಂಟ್ಸ್ ಆಫೀಸರ್, ಡೆಪ್ಯುಟಿ ಸೆಕ್ರೆಟರಿ, ಅಸಿಸ್ಟಂಟ್ ಡೈರೆಕ್ಟರ್, ಪರ್ಸನಲ್ ಸೆಕ್ರೆಟರಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. 56 ವರ್ಷದೊಳಗಿನ ಅಭ್ಯರ್ಥಿಗಳನ್ನು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ www.isro.gov.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ನಿರ್ದೇಶಕರು (ಸಿಬ್ಬಂದಿ ಮತ್ತು ಆಡಳಿತ),
ಬಾಹ್ಯಾಕಾಶ ಇಲಾಖೆ,
ಅಂತರಿಕ್ಷ ಭವನ, ಹೊಸ ಬಿಇಎಲ್ ರಸ್ತೆ,
ಬೆಂಗಳೂರು – 560094.



















