ಉಡುಪಿ : ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಅವರು ಇಂದು ಬೆಳಗ್ಗೆ ಪತ್ನಿಯೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಮೂಕಾಂಬಿಕೆಗೆ ವಿಶೇಷ ಪೂಜೆಯನ್ನ ಸಲ್ಲಿಸಿದ ಅವರು, ಚಂಡಿಕಾ ಹೋಮದಲ್ಲಿ ಪಾಲ್ಗೊಂಡಿದ್ದಾರೆ. ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಉಪಮುಖ್ಯಮಂತ್ರಿಗಳಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗಿದೆ.

ಈ ವೇಳೆ ಮಾತನಾಡಿದ ಅವರು, ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರಿಗೆ ದರ್ಶನ, ಪಾರ್ಕಿಂಗ್, ವಸತಿ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ನಿಡುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗಿದ್ದು, ಮುಂದೆ ಅದನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಸಂಬಂಧಿಸಿ ಒತ್ತುವರಿಯಾಗಿರುವ ಎಲ್ಲಾ ಜಮೀನನ್ನು ತೆರವುಗೊಳಿಸಲು ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಶಾಸಕ ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಕೇಸ್ – ನಾಲ್ವರ ಬಂಧನ!



















