ಬೆಂಗಳೂರು: ನಗರದಲ್ಲಿ ಸಿಸಿಬಿ ಅಧಿಕಾರಿಗಳು (CCB) ಬೃಹತ್ ಮಾದಕ ವಸ್ತು (Drugs) ಸಾಗಟ ಜಾಲ ಪತ್ತೆ ಹಚ್ಚಿದ್ದಾರೆ. ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.
ಹೊಸ ವರ್ಷಾಚರಣೆಗಾಗಿ ಗಾಂಜಾ ಸಪ್ಲೆ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಿಂದ 3.25 ಕೋಟಿ ರೂ. ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಡ್ರಗ್ ಪೆಡ್ಲರ್ ಅಚ್ಚು, ಜಮೀರ್ ಮತ್ತು ರೇಷ್ಮಾ ದಂಪತಿಗಳನ್ನು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದಾರೆ.
ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂಜಾ ಸಂಗ್ರಹಿಸಿದ್ದರು. ಸಂಗ್ರಹಿಸಿದ್ದ ಗಾಂಜಾವನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರು, ಕೇರಳದಲ್ಲಿ ಮಾರಲು ಪ್ಲ್ಯಾನ್ ರೂಪಿಸಿದ್ದರು. ಸಂಗ್ರಹಿಸಲಾಗಿದ್ದ ಗಾಂಜಾವನ್ನು ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆ ಪಡೆದಿದ್ದರು. ಬೆಡ್ಶೀಟ್ನಲ್ಲಿ ಗಾಂಜಾ ತುಂಬಿ, ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.