ಬೆಂಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಗೆ ಮುಖಭಂಗವಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಕೋಮುವಾದಿ ಪಕ್ಷ. ಅದರ ಕೋಮುವಾದಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ. ಅದು ಕೋಮುವಾದದ ಮೂಲಕ ಸಮಾಜದಲ್ಲಿ ಕಿಚ್ಚು ಹಚ್ಚಲು ನೋಡಿತು. ಇದಕ್ಕೆ ಮತದಾರ ತಕ್ಕ ಉತ್ತರ ನೀಡಿದ್ದಾರೆ. ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನು ಮತದಾರ ನೀಡಿದ್ದಾರೆ ಎಂದು ಹೇಳಿದ್ದಾರೆ.
ಇಳಿ ವಯಸ್ಸಿನಲ್ಲೂ ದೇವೇಗೌಡರನ್ನು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದರು. ಅವರನ್ನು ಕರೆ ತರಬಾರದಿತ್ತು. ಕರೆತಂದರು ಇದು ಜನರಿಗೆ ಇಷ್ಟವಾಗಲಿಲ್ಲ. ಸಾರ್ವಜನಿಕ ಜೀವನದಲ್ಲಿ ಹೇಗೆ ಜವಾಬ್ದಾರಿಯುತವಾಗಿ ಇರಬೇಕು ಎನ್ನುವುದನ್ನು ಚನ್ನಪಟ್ಟಣದ ಜನತೆ, ಕುಮಾರಸ್ವಾಮಿಯವರಿಗೆ ಪಾಠ ಮಾಡಿದ್ದಾರೆ ಎಂದು ಹೇಳಿದ್ದಾರೆ.
ರಾಜಕೀಯಕ್ಕಾಗಿ ದೇವೇಗೌಡರನ್ನ ಈ ಇಳಿ ವಯಸ್ಸಿನಲ್ಲಿ ಬೀದಿ ಬೀದಿ ಸುತ್ತಾಡಿಸಿದರು ಎಂದು ದಿನೇಶ್ ಗುಂಡೂರಾವ್ ಬೇಸರ ವ್ಯಕ್ತ ಪಡಿಸಿದ್ದಾರೆ.