ಚಾಮರಾಜನಗರ : ಮಲೈ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ ಕನಕಪುರದ ಸಂಗಮದಿಂದ ಆರಂಭಗೊಂಡಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ವ್ಯಾಪ್ತಿಯ ಸಂಗಮದಿಂದ ಕಾಲ್ನಡಿಗೆಯಲ್ಲೇ ಹೊರಟ ಭಕ್ತರು, ಕಾಡಿನ ಮಾರ್ಗವಾಗಿ ಮಹದೇಶ್ವರ ಬೆಟ್ಟ ತಲುಪುತ್ತಿದ್ದಾರೆ.
ಸಂಗಮ ನದಿಯನ್ನು ದಾಟಿಕೊಂಡು ಭಕ್ತರು ಪಾದಯಾತ್ರೆ ಮುಂದುವರಿಸುತ್ತಿದ್ದು, ಈ ಬಾರಿ ನೀರಿನ ಹರಿವು ಕಡಿಮೆ ಇರುವುದರಿಂದ ಯಾತ್ರೆ ಸುಗಮವಾಗಿ ನಡೆಯುತ್ತಿದೆ. ಚಾಮರಾಜನಗರ ಜಿಲ್ಲೆಯ ಹನೂರು ಮಾರ್ಗವಾಗಿ ಮಾದಪ್ಪನ ಬೆಟ್ಟಕ್ಕೆ ಭಕ್ತರು ಸಾಗುತ್ತಿದ್ದಾರೆ.
ಪಾದಯಾತ್ರೆಯಲ್ಲಿ ಭಾಗವಹಿಸಿರುವ ಭಕ್ತರು ಕಾಡಿನಲ್ಲಿಯೇ ಅಡುಗೆ ಮಾಡಿಕೊಂಡು ತಮ್ಮ ಯಾತ್ರೆಯನ್ನು ಮುಂದುವರಿಸುತ್ತಿದ್ದಾರೆ. ಯಾತ್ರೆಯ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲೇ ಭದ್ರತೆ ಒದಗಿಸಿದ್ದಾರೆ.
ಇದನ್ನೂ ಓದಿ : ಮೈಸೂರು | ಶ್ರೀಕಂಠೇಶ್ವರ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿ ಸಭೆ



















