ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ಆರೋಪ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಉನ್ನತ ಹುದ್ದೆಯಲ್ಲಿರು ಈ ಅಧಿಕಾರಿಯ ಪ್ರಕರಣ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿದ ಹಿನ್ನೆಲೆ ಅವರನ್ನ ಸರ್ಕಾರ ಅಮಾನತುಗೊಳಿಸಿದೆ.

ನಿನ್ನೆ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ತಿಳಿಸಿದೆ.
ಅಧಿಕಾರಿಯ ವರ್ತನೆ ಅಖಿಲ ಭಾರತ ಸೇವೆಗಳ ನಿಯಮಗಳು, 1968 ರ ನಿಯಮ 3 ರ ಉಲ್ಲಂಘನೆಯಾಗಿದೆ. ಆದ್ದರಿಂದ ವಿಚಾರಣೆಯನ್ನು ಬಾಕಿ ಇರಿಸಿ. ಡಾ. ಕೆ. ರಾಮಚಂದ್ರ ರಾವ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ. ಅಖಿಲ ಭಾರತ ಸೇವೆಗಳ ನಿಯಮಗಳು. 1969 ರ ನಿಯಮ 3(1)(a) ಅಡಿಯಲ್ಲಿ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
ಇದನ್ನೂ ಓದಿ: ರಾಸಲೀಲೆ ವಿಡಿಯೋ ಫ್ಯಾಬ್ರಿಕೇಟೆಡ್, ಇದೆಲ್ಲವೂ ಸುಳ್ಳು, ತನಿಖೆಯಾಗಲಿ | ಡಿಜಿಪಿ ರಾಮಚಂದ್ರರಾವ್



















