ಬೆಳಗಾವಿ : ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರರಾವ್ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.
ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ತಮ್ಮ ಮಲಮಗಳು, ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಅವರನ್ನು ರಾಜ್ಯ ಸರ್ಕಾರ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮರುನೇಮಕ ಮಾಡಿತ್ತು.ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲೂ ರಾಮಚಂದ್ರರಾವ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆಗ ಸರ್ಕಾರಕ್ಕೆ ಮುಜುಗರ ಆಗಿತ್ತು. ಈಗ ರಾಸಲೀಲೆ ವಿಡಿಯೋ ವೈರಲ್ ಆಗುತ್ತಲೇ ಮತ್ತೆ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.
ಇದನ್ನೂ ಓದಿ : ಕಿವೀಸ್ ಸರಣಿ ಸೋಲಿನ ಬೆನ್ನಲ್ಲೇ ರಣಜಿ ಅಖಾಡಕ್ಕೆ ಗಿಲ್-ಜಡೇಜಾ



















