ಮೈಸೂರು : ಮಹಿಳಾ ಸಿಬ್ಬಂದಿ ಮೇಲೆ ಡಿಜಿಪಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಪತ್ರದಲ್ಲಿ ತಿಳಿಸಿರುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾ ನಿರ್ದೇಶಕರಾದ ರಾಮಚಂದ್ರರಾವ್‌ರವರ ಅಸಭ್ಯ ವರ್ತನೆಯ ವಿಡಿಯೋ ಬಗ್ಗೆ ನಿಮಗೆ ತಿಳಿದಿರುತ್ತದೆ. ಇದೇ ರೀತಿ ಹೆಚ್ಚಿನ ಸರ್ಕಾರಿ ಕಚೇರಿಗಳಲ್ಲಿ, ತಮ್ಮ ಅಧಿಕೃತ ಕೊಠಡಿಗಳಲ್ಲೇ ಹಿರಿಯ ಅಧಿಕಾರಿಗಳು ತಮ್ಮ ಕೈಕೆಳಗಿನ ಮಹಿಳಾ ಅಧಿಕಾರಿಗಳೊಂದಿಗೆ ಅಥವಾ ಸಿಬ್ಬಂದಿಗಳು ಅಥವಾ ತಮ್ಮನ್ನು ಭೇಟಿ ಮಾಡಲು ಬರುವ ಇತರೆ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಹಾಗಾಗಿ ಸಿಸಿ ಕ್ಯಾಮಾರವನ್ನು ಎಲ್ಲಾ ಅಧಿಕಾರಿಗಳ ಕೊಠಡಿಯಲ್ಲಿ ಕಡ್ಡಾಯವಾಗಿ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನೂ ಕೆಲಸ ಅಥವಾ ಮಾನ ಕಳೆದುಕೊಳ್ಳುವ ಭೀತಿಯಿಂದ ಇಂತಹ ಕೃತ್ಯಗಳ ಬಗ್ಗೆ ಕೆಲ ಹೆಣ್ಣು ಮಕ್ಕಳು ದೂರು ನೀಡುವುದಿಲ್ಲ. ಆದ್ದರಿಂದ ಕೂಡಲೇ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಹಿರಿಯ ಅಧಿಕಾರಿಗಳ ಕೊಠಡಿಯಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮಾರಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರ್‌ಟಿಐ ಸ್ನೇಹಮಯಿ ಕೃಷ್ಣ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರದ ಮೂಲಕ ಕೋರಿದ್ದಾರೆ.
ಇದನ್ನೂ ಓದಿ : ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!



















