ಕುಂದಾಪುರ : ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಅವಹೇಳನಕಾರಿ ವೀಡಿಯೊಗಳನ್ನು ಮಾಡಿ ಹರಿಬಿಡುತ್ತಿದ್ದು, ಇದು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಧಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಧರ್ಮಸಂರಕ್ಷಣಾ ಜಾಥಾವನ್ನು ನಡೆಸಲಾಗಿದ್ದು, ಇದೀಗ ಕುಂದಾಪುರದಲ್ಲಿಯೂ ಆಯೋಜಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಮತ್ತು ಅವಹೇಳನಗಳ ವಿರುದ್ಧ, ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ, ಕುಂದಾಪುರ ಇವರ ನೇತೃತ್ವದಲ್ಲಿ ಆ.21ರ(ಗುರುವಾರ) ಬೆಳಿಗ್ಗೆ10 ಗಂಟೆಗೆ ಶಾಸ್ತ್ರೀ ಸರ್ಕಲ್ ಕುಂದಾಪುರದಲ್ಲಿ ಧರ್ಮ ಸಂರಕ್ಷಣಾ ಜಾಗೃತಾ ಜನರ ಜಾಥಾವನ್ನು ಆಯೋಜಿಸಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿಗಳ ವಿರುದ್ಧ ಅಪಮಾನ ಹಾಗೂ ಅವಹೇಳನ ಮಾಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಲಿದೆ.



















