ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುದಾರಿ ಸಾಕ್ಷಿ ದೂರುದಾರ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ತಾನಾಸಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಸ್‌ಐಟಿ ಚಿನ್ನಯ್ಯನ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ತಾನು ಶವ ಹೂಳುತ್ತಿರುವ ವಿಚಾರ ಅಣ್ಣ ತಾನಾಸಿಗೂ ತಿಳಿದಿತ್ತು ಎಂದು ಹೇಳಿದ್ದ. ಈ ಕಾರಣಕ್ಕೆ ತಾನಾಸಿಯನ್ನು ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.