ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯ ಮಂಗಳವಾರ (ಸೆ.23) ಬೆಳ್ತಂಗಡಿ ನ್ಯಾಯಾಲಯದಲ್ಲಿ ಬಿ.ಎನ್.ಎಸ್.ಎಸ್ 183 ಹೇಳಿಕೆ ನೀಡಿದ್ದಾನೆ. ಆದರೆ ಇಂದು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಕ್ತಾಯವಾಗಿಲ್ಲ ಎಂದು ವರದಿ ಹೇಳಿದೆ
ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಸುಮಾರು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದಾನೆ. ಆದರೆ ಇದು ಪೂರ್ಣವಾಗಿಲ್ಲ. ಹೀಗಾಗಿ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲು ಸೂಚನೆ ನೀಡಲಾಗಿದೆ.
ಹೀಗಾಗಿ ಆರೋಪಿ ಚಿನ್ನಯ್ಯನನ್ನು ನ್ಯಾಯಾಲಯದಿಂದ ಶಿವಮೊಗ್ಗ ಜೈಲಿಗೆ ರವಾನೆ ಮಾಡಲಾಗಿದೆ.


















