ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯ ಎಂಬಾತನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಸೆ. 3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ.ಎಚ್.ಟಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಸೆ.6 ವರೆಗೆ ಮತ್ತೆ ಎಸ್.ಐ.ಟಿ ಕಸ್ಟಡಿಗೆ ನೀಡಿ ಆದೇಶ ಮಾಡಿದೆ.
ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನನ್ನು ಆ.23 ರಂದು ಬಂಧಿಸಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಕಸ್ಟಡಿಗೆ ಪಡೆದಿದ್ದರು.