ಮಂಗಳೂರು : ಧರ್ಮಸ್ಥಳ ವಿಷಯದಲ್ಲಿ ಸರ್ಕಾರ ಈಗಾಗಲೇ ಎಸ್.ಐ.ಟಿ ರಚನೆ ಮಾಡಿದೆ. ಬಿಜೆಪಿಯವರು ನಾವೆಲ್ಲಾ ಸ್ವಾಗತ ಮಾಡಿದ್ದೇವೆ. ಇಂತಹ ಪ್ರಕರಣಗಳಲ್ಲಿ ಆರೋಪ ಪ್ರತ್ಯಾರೋಪ ಸಹಜ. ಸತ್ಯಾಸತ್ಯತೆ ಬಗ್ಗೆ ಜನರಿಗೆ ಶೀಘ್ರ ತಿಳಿ ಹೇಳುವಂತಹ ಕೆಲಸ ಸರ್ಕಾರ ಮಾಡಬೇಕಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಚೌಟ, ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಬೆನ್ನೆಲೆಬಾಗಿರುವ ಕೆಂಪು ಕಲ್ಲು ,ಮರಳಿನ ಸಮಸ್ಯೆ ಹೆಚ್ಚಾಗಿದೆ. ರಾಜ್ಯ ಸರ್ಕಾರದ ತಪ್ಪು ತಿಳುವಳಿಕೆಯಿಂದ ಅವ್ಯವಸ್ಥೆ ನಿರ್ಮಾಣವಾಗಿದೆ. ಈ ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಎಲ್ಲಾ ಶಾಸಕರು ಹಕ್ಕೊತ್ತಾಯ ಮಾಡಿದ್ದೇವು. ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದೆ. ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೇವೆ. ಜಿಲ್ಲೆಯ ದಿಶಾ ಸಮಿತಿ ಸಭೆಯಲ್ಲೂ ಚರ್ಚೆಯಾಗಿದೆ. ಆದರೆ ಮರಳು, ಕೆಂಪು ಕಲ್ಲಿನ ವ್ಯವಸ್ಥೆಯನ್ನು ಸರಳೀಕರಣ ಮಾಡಿಲ್ಲ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಆರ್ಥಿಕತೆಗೆ ದೊಡ್ಡ ಪೆಟ್ಟಾಗಿದೆ ಎಂದವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟಡಗಳ ನಿರ್ಮಾಣದಲ್ಲಿ ಎಲ್ಲಾ ಕೂಲಿ ಕಾರ್ಮಿಕರು, ಸಣ್ಣ ಸಣ್ಣ ಕಾಂಟ್ರಾಕ್ಟ್ರ್ ಗಳು ಬಿಲ್ಡರ್ ಗಳು ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ. ಜನಸಾಮಾನ್ಯರು ಮನೆ ಕಟ್ಟುವವರ ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಸ್ಪಂದನೆ ಕೊಟ್ಟಿಲ್ಲ. ನಾವು ಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ಮನನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇವೆ. ಆದಷ್ಟು ಶೀಘ್ರದಲ್ಲೇ ಇದನ್ನು ಸರಳೀಕೃತ ಮಾಡಿಕೊಡಬೇಕು. ಸರಳೀಕೃತ ನೀತಿಯನ್ನು ಮಾಡಿ ಜನರಿಗೆ ಅತ್ಯಂತ ಸುಲಭವಾಗಿ ಕೆಂಪುಕಲ್ಲು, ಮರಳು ಒದಗಿಸಿಕೊಡುವಂತೆ ಮನವಿ ಮಾಡಿದ್ದೇವೆ. ಸಿಎಂ ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನ ಕರೆದು ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಡುವ ಭರವಸೆ ಕೊಟ್ಟಿದ್ದಾರೆ ಎಂದವರು ಹೇಳಿದ್ದಾರೆ.