ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿಂತೆ ನಿನ್ನೆ(ಮಂಗಳವಾರ) ವಿಪಕ್ಷಗಳು ಚರ್ಚೆಗೆ ಅವಕಾಶ ಕೇಳಿದ್ದು, ಶೂನ್ಯವೇಳೆ ಅವಕಾಶ ಮಾಡಿಕೊಟ್ಟಿದ್ದೆ. ಸರ್ಕಾರವೂ ಅದಕ್ಕೆ ಉತ್ತರ ಕೊಟ್ಟಿದೆ ನೀಡಿದ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಖಾದರ್, ವಿಪಕ್ಷದವರು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಚರ್ಚೆಗ ಅವಕಾಶ ಕೇಳಿದ್ದಾರೆ. ಖಂಡಿತವಾಗಿಯೂ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಸಾಕ್ಷಿ ದೂರುದಾರನನ್ನು ಮುಂದಿಟ್ಟುಕೊಂಡೇ ಎಸ್.ಐ.ಟಿ ತನಿಖೆ ಮಾಡುತ್ತಿದೆ. ಸತ್ಯಾಸತ್ಯೆತೆ ಹರೊಬರಲಿ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ತನಿಖೆಗೆ ಅಡ್ಡಿಪಡಿಸುವುದು ಬೇಡ. ತನಿಖೆ ಪೂರ್ಣಗೊಳ್ಳಲಿ. ಸತ್ಯಾಂಶ ಹೊರಬರಲಿ ಎಂದು ತಿಳಿಸಿದ್ದಾರೆ.
ತನಿಖೆ ಮುಗಿಯುವುದಕ್ಕೂ ಮುನ್ನವೇ ನಾವೇ ತೀರ್ಪು ನೀಡುವುದು ಸರಿಯಲ್ಲ. ಧಾರ್ಮಿಕ ಸ್ಥಳದ ಪವಿತ್ರತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ. ಈ ವಿಚಾರದಲ್ಲಿ ಯಾರು ಸ್ವಯಂ ಅಭಿಪ್ರಾಯ ನೀಡಬಾರದು. ತನಿಖೆ ಆಗುವವರೆಗೂ ಎಲ್ಲರೂ ಸಮಾಧಾನವಾಗಿ ಇರಬೇಕು. ನಾವು ಸಮಾನತೆ, ಸಹೋದರತೆಯ ಭಾವನೆಯಲ್ಲಿ ಇರುವವರು. ಹೀಗಾಗಿ ತನಿಖೆ ಆಗುವ ಮುನ್ನಾ ಯಾರು ಮಾತಾಡುವುದು ಬೇಡ. ಸದನದಲ್ಲಿ ಧರ್ಮಸ್ಥಳದ ವಿಚಾರವಾಗಿ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದಿದ್ದಾರೆ.



















