ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕರೆತಂದು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ.
ಇಂದು ಬೆಳಗ್ಗಿನ ಜಾವದ ವರೆಗೂ ತಿಮರೋಡಿಯ ಮನೆಯಲ್ಲಿ ಈತನಿಗೆ ಸಂಬಂಧಿಸಿದ ವಸ್ತುಗಳ ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು.



















