ಶಿವಮೊಗ್ಗ: ಧರ್ಮಸ್ಥಳದ ಅನನ್ಯ ಭಟ್ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧಿಸಿದಂತೆ ಎಸ್‌ಐಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತ ಭಟ್ ಎನ್ನುವವರು 1999ರಿಂದ 2007ರವರೆಗೆ ರಿಪ್ಪನ್ ಪೇಟೆಯಲ್ಲಿ ವಾಸವಿದ್ದರು ಎಂದು ಸ್ಥಳೀಯ ಮೂಲಗಳ ಮೂಲಕ ತಿಳಿದಿದೆ ಎಂಬ ಮಾಹಿತಿ ಮೇರೆಗೆ ಭೇಟಿ ನೀಡಿ ಪರಿಶಿಲಿಸಿದೆ ಎಂದು ತಿಳಿದು ಬಂದಿದೆ.
ಎಸ್‌ಐಟಿ ಸುಜಾತ ಭಟ್ ಕುಟುಂಬದ ಹಿನ್ನೆಲೆಯ ಬಗ್ಗೆ ವಿವರಗಳನ್ನು ಕಲೆಹಾಕುತ್ತಿದ್ದು, ಈ ನಿಟ್ಟಿನಲ್ಲಿ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಸಿಪಿಐ ಮಂಜುನಾಥ್ ಗೌಡ ನೇತ್ರತ್ವದ ಎಸ್ ಐಟಿ ತಂಡ ಪಟ್ಟಣಕ್ಕೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.



















