ಮಂಗಳೂರು : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂಬ ಕುರಿತು ದಾಖಲಾದ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ ಇಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ತನಿಖಾ ಪ್ರಕ್ರಿಯೆ ಮುಂದುವರಿಸಿದ್ದಾರೆ.
ತನಿಖೆಯ ಭಾಗವಾಗಿ ಇಂದು ಸ್ಥಳ ಮಹಜರು ಪ್ರಕ್ರಿಯೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಬೆಳ್ತಂಗಡಿಯ ಎಸ್ಐಟಿ ಕಚೇರಿ ಎದುರು ಬಿಗು ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕಂದಾಯ, ಭೂ ದಾಖಲೆ ವಿಭಾಗದ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ, ಎಸ್ಐಟಿ ಕಚೇರಿ ಬಳಿ ನಿಂತಿರುವ ಮೂರು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಇಂದು ಅನಾಮಿಕ ದೂರುದಾರನನ್ನು ಆತ ಸೂಚಿಸುವ ಸಮಾಧಿ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.



















