ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನ 12 ದಿನಗಳ ಎಸ್.ಐ.ಟಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಇಂದು (ಬುಧವಾರ,ಸೆ.03) ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ ಎಚ್.ಟಿ. ಮುಂದೆ ಹಾಜರುಪಡಿಸಿದ್ದಾರೆ.
ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮತ್ತೆ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಎಸ್.ಐ.ಟಿ ಅಧಿಕಾರಿಗಳು ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.


















