ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ಮೂಲಕ ಸುದ್ದಿ ಪ್ರಸಾರ ಮಾಡಿದ್ದ ವಿಚಾರಕ್ಕೆ ಸ್ಪಷ್ಟನೆ ನೀಡುವಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್ ಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಅದರಂತೆ ಇಂದು(ಸೋಮವಾರ, ಸೆ.08) ಮಧ್ಯಾಹ್ನ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದಾರೆ.
ಮನಾಫ್ ಜೊತೆಗೆ ಯೂಟ್ಯೂಬರ್ ಅಭಿಷೇಕ್ ಕೂಡ ಹಾಜರಾಗಿದ್ದು, ಎಸ್. ಐ.ಟಿ ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೆ ದಾಖಲೆ ಸಮೇತ ಉತ್ತರಿಸುತ್ತೇವೆ ಎಂದಿದ್ದಾರೆ.
ಇನ್ನು, ಯೂಟ್ಯೂಬರ್ ಮನಾಫ್ ಜೊತೆಗೆ ಕೇರಳದ ಮಾನವ ಹಕ್ಕುಗಳ ಆಯೋಗದ ಸದಸ್ಯರು ಬಂದಿದ್ದಾರೆ.