ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ವಿರುದ್ಧ ದಾಖಲಾದ ಧರ್ಮಸ್ಥಳದಲ್ಲಿ ಪ್ರಕರಣ ಸಂಬಂಧ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಆ.25 ರಂದು ಮತ್ತೆ ಎರಡನೇ ದಿನ ವಿಚಾರಣೆಗೆ ತನ್ನ ವಕೀಲರ ಜೊತೆ ಕಾರಿನಲ್ಲಿ ಆಗಮಿಸಿದ್ದಾನೆ.
ನಿನ್ನೆ (ರವಿವಾರ, ಆ.24) ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಕೀಲರ ಜೊತೆ ವಾಪಸ್ಸಾಗಿದ್ದ. ಈ ವೇಳೆ ಆ.25 ಸೋಮವಾರದಂದು ಮತ್ತೆ ವಿಚಾರಣೆಗೆ ಬರಲು ನೋಟಿಸ್ ನೀಡಿ ಸೂಚನೆ ಕೊಟ್ಟು ದಾಖಲೆಗಳಿಗೆ ಸಹಿ ಪಡೆದು ಕಳುಹಿಸಿದ್ದಾರೆ.



















