ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಪೊಲೀಸ್ ಇನ್ಸಪೆಕ್ಟರ್ ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ಸಂಭವಿಸಿದೆ.
ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಸುಟ್ಟು ಕರಕಲಾಗಿರುವ ವ್ಯಕ್ತಿ, ಕಾರು ಕೂಡಾ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗಿಗೆ ಹೋಗುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. 2003ರ ಬ್ಯಾಚಿನ ಇವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಸದ್ಯ ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ಸಿಗರೇಟ್, ಡ್ರಗ್ಸ್ ಪತ್ತೆ | ವಾರ್ಡರ್ ಅರೆಸ್ಟ್!



















