ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ತ್ ಯಾದವ್ ಅವರ ಪೀಠ ಈ ಕುರಿತು ಆದೇಶ ಹೊರಡಿಸಿದೆ. ಪ್ರಕರಣ ಕೊನೆಯ ಹಂತದಲ್ಲಿರುವುದರಿಂದ ಜಾಮೀನು ನೀಡಬೇಕು ಎಂದು ವಿನಯ್ ಕುಲಕರ್ಣಿ ಪರವಾಗಿ ವಾದ ಮಂಡಿಸಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಈಗಾಗಲೇ ಜಾಮೀನು ರದ್ದುಪಡಿಸಿರುವ ಹಿನ್ನೆಲೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಸಾಕ್ಷಿಗಳಿಗೆ ನ್ಯಾಯಾಲಯದೊಳಗೆ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಗೊಳಿಸಿತ್ತು. ಇದರಿಂದ ಜಾಮೀನಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರಸ್ತುತ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿದ್ದಾರೆ.
ಇದನ್ನೂ ಓದಿ : ರಾಜೀವ್ ಗೌಡ ಕೋರ್ಟ್‌ಗೆ ಹಾಜರು | ಚಿಕ್ಕಬಳ್ಳಾಪುರದಲ್ಲಿ ಬಿಗಿ ಬಂದೋಬಸ್ತ್



















