ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ (DHFWO Chikkaballapur Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್ ನರ್ಸ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಚಿಕ್ಕಬಳ್ಳಾಪುರ
ಹುದ್ದೆಗಳ ಹೆಸರು: ಸ್ಟಾಫ್ ನರ್ಸ್ ಇತ್ಯಾದಿ
ಒಟ್ಟು ಹುದ್ದೆಗಳು: 14
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 10
ಲ್ಯಾಬ್ ಟೆಕ್ನಿಶಿಯನ್, ಎಕ್ಸ್ ರೇ ಟೆಕ್ನಿಶಿಯನ್, ಸ್ಟಾಫ್ ನರ್ಸ್, ಇನ್ಸೆಕ್ಟ್ ಕಲೆಕ್ಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎಎಂಎಸ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 33 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ chikkaballapur.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು



















