ಬೆಂಗಳೂರು : ಬೆಂಗಳೂರಿನಲ್ಲಿಯೇ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Bangalore Recruitment 2026) ಖಾಲಿ ಇರುವ 22 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 22 ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು
ಹುದ್ದೆ ಹೆಸರು: ಮೆಡಿಕಲ್ ಆಫೀಸರ್
ಒಟ್ಟು ಹುದ್ದೆ: 22
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಸಂದರ್ಶನದ ದಿನಾಂಕ: ಜೂನ್ 09
ಮೆಡಿಕಲ್ ಆಫೀಸರ್, ನರ್ಸಿಂಗ್ ಆಫೀಸರ್, ಲ್ಯಾಬ್ ಟೆಕ್ನಿಶಿಯನ್ಸ್ ಹಾಗೂ ಜೂನಿಯರ್ ಹೆಲ್ತ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಎಂಬಿಬಿಎಸ್, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರಿಗೆ 60 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ bengaluruurban.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ಜಿಲ್ಲಾ ಆರ್.ಸಿ.ಎಚ್. ಅಧಿಕಾರಿಯವರ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣ, ಹಳೆಯ ಟಿ.ಬಿ. ಆಸ್ಪತ್ರೆ, ಹಳೆಯ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ, ಇಂದಿರಾನಗರ, ಬೆಂಗಳೂರು-560038.


















