ಬೆಂಗಳೂರು: ಗದಗದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Gadag Recruitment 2025) ಖಾಲಿ ಇರುವ ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಡಿಕಲ್ ಆಫೀಸರ್ ಹಾಗೂ ಸ್ಪೀಚ್ ಥೆರಪಿಸ್ಟ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗದಗ
ಹುದ್ದೆ ಹೆಸರು: ಮೆಡಿಕಲ್ ಆಫೀಸರ್ ಹಾಗೂ ಸ್ಪೀಚ್ ಥೆರಪಿಸ್ಟ್
ಒಟ್ಟು ಹುದ್ದೆ: 03
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನ ದಿನಾಂಕ: ಅಕ್ಟೋಬರ್ 27
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಂಬಿಬಿಎಸ್, ಡಿಎಂ, ಎಂಡಿ, ಬಿಪಿಟಿ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. 45ರಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 75 ಸಾವಿರ ರೂಪಾಯಿಯಿಂದ 1.5 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಂದರ್ಶನದ ವಿವರ
ಸ್ಥಳ: ಜಿಲ್ಲಾಡಳಿತ ಕಟ್ಟಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 101, ಗದಗ. ಸಮಯ: ಬೆಳಗ್ಗೆ 10.30. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು gadag.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರು ವಿದ್ಯಾರ್ಹತೆ, ಗುರುತಿನ ಚೀಟಿ ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಬರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.