ಬೆಂಗಳೂರು: ಹಾಸನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Hassan Recruitment 2025) ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಸಾಂಕ್ರಾಮಿಕ ರೋಗಶಾಸ್ತ್ರಜ್ಞ (Epidemiologist), ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ
ಹುದ್ದೆ ಹೆಸರು: ಸಾಂಕ್ರಾಮಿಕ ರೋಗಶಾಸ್ತ್ರಜ್ಞ (Epidemiologist), ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್
ಒಟ್ಟು ಹುದ್ದೆ: 06
ಉದ್ಯೋಗ ಸ್ಥಳ: ಹಾಸನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 11
ಒಂದು ಡಿಸ್ಟ್ರಿಕ್ಟ್ ಕೋ-ಆರ್ಟಿನೇಟರ್, ಒಂದು ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹಾಗೂ ನಾಲ್ಕು ಬ್ಲಾಕ್ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಬಿಬಿಎಸ್, ಡಿಎಂ, ಎಂಡಿ, ಎಂಎಚ್ಎ, ಬಿಡಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಮೆರಿಟ್ ಲಿಸ್ಟ್, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ. ಸಂಬಳ ನೀಡಲಾಗುತ್ತದೆ ಎಂದು ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ hassan.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ District Surveyors Office, Hassan, Karnataka ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಇದನ್ನೂ ಓದಿ : ರೋಹಿತ್ ಶರ್ಮಾ ದಾಖಲೆ ಮುರಿದ ಬಾಬರ್ ಅಜಮ್: ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ



















