ಬೆಂಗಳೂರು : ನೀವೇನಾದರೂ ಕಲಬುರಗಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕಲಬುರಗಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Kalaburagi Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲಬುರಗಿ
ಹುದ್ದೆ ಹೆಸರು: ಸೂಪರ್ ವೈಸರ್
ಒಟ್ಟು ಹುದ್ದೆ: 2
ಉದ್ಯೋಗ ಸ್ಥಳ: ಕಲಬುರಗಿ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 18
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ ಸೇರಿ ಯಾವುದೇ ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 22 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ kalaburagi.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?


















