ಬೆಂಗಳೂರು: ಚಿನ್ನದ ನಾಡು ಕೋಲಾರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Kolar Recruitment 2025) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನೇತ್ರ ಸಹಾಯಕ (Ophthalmic Assistant) ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನವೆಂಬರ್ 25ರಂದು ಸಂದರ್ಶನ ನಡೆಯಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಲಾರ
ಹುದ್ದೆ ಹೆಸರು: ನೇತ್ರ ಸಹಾಯಕ
ಒಟ್ಟು ಹುದ್ದೆ: 3
ಉದ್ಯೋಗ ಸ್ಥಳ: ಕೋಲಾರ, ಕರ್ನಾಟಕ
ಸಂದರ್ಶನ ನಡೆಯುವ ದಿನಾಂಕ: ನವೆಂಬರ್ 25
ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಪದವಿ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 15,114 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
Office of the District Health and Family Welfare Officer, KNTB Sanatorium Hospital Prmises, Bangarpet Road, Kolar. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ kolar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಗುತ್ತಿಗೆ ಆಧಾರದ ನೌಕರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಒಂದೇ ವರ್ಷಕ್ಕೆ ಸಿಗಲಿದೆ ಗ್ರ್ಯಾಚುಟಿ



















