ಬೆಂಗಳೂರು : ಎಂಬಿಬಿಎಸ್, ಡಿಪ್ಲೋಮಾ ಮುಗಿಸಿ ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಕೋಲಾರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Chikkaballapur Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಮೆಡಿಕಲ್ ಆಫೀಸರ್, ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಲಾರ
ಹುದ್ದೆ ಹೆಸರು: ಮೆಡಿಕಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆ: 2
ಉದ್ಯೋಗ ಸ್ಥಳ: ಕೋಲಾರ
ಸಂದರ್ಶನದ ದಿನಾಂಕ: ನವೆಂಬರ್ 30
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. 65 ವರ್ಷದೊಳಗಿನವರು ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನಕ್ಕೆ ಹಾಜರಾಗಬಲು ಬಯಸುವವರು ಮೊದಲಿಗೆ http://kolar.nic.in/ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
The Office of the District Health and Family Welfare Officer, K.N.T.B. Sanatorium Hospital premises, Bangarapet Road, Kolar.


















