ಬೆಂಗಳೂರು: ನೀವು ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸುದ್ದಿ ಇಲ್ಲಿದೆ. ಕೊಪ್ಪಳದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Koppal Recruitment 2025) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ
ಹುದ್ದೆ ಹೆಸರು: ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆ: 03
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 26
ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್, ಪ್ರೋಗ್ರಾಂ ಅಸಿಸ್ಟಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಎಸ್ಸಿ, ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 42,500 ಸಾವಿರ ರೂ. ಸಂಬಳ ನೀಡಲಾಗುತ್ತದೆ ಎಂದು ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ https://koppal.nic.in/ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ: 70 ಲಕ್ಷ ರೈತರು ಪಿಎಂ ಕಿಸಾನ್ ಯೋಜನೆಯಿಂದ ಹೊರಗೆ : ನೀವು ಹೀಗೆ ಚೆಕ್ ಮಾಡಿಕೊಳ್ಳಿ



















