ಬೆಂಗಳೂರು: ನೀವು ರಾಯಚೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ರಾಯಚೂರಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Chikkaballapur Recruitment 2026) ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು
ಹುದ್ದೆ ಹೆಸರು: ಮಹಿಳಾ ಆರೋಗ್ಯ ಸಹಾಯಕಿ
ಒಟ್ಟು ಹುದ್ದೆ: 20
ಉದ್ಯೋಗ ಸ್ಥಳ: ರಾಯಚೂರು, ಕರ್ನಾಟಕ
ಸಂದರ್ಶನದ ದಿನಾಂಕ: ಮಾರ್ಚ್ 11
ಒಂದು ಹೆಲ್ತ್ ಇನ್ಸ್ ಪೆಕ್ಟರ್, 19 ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 15,397 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ raichur.nic.inಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ಹಾಗೂ ಮೆರಿಟ್ ಲಿಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : HLL Lifecare ಕಂಪನಿಯಲ್ಲಿ 40 ಹುದ್ದೆಗಳ ನೇಮಕ | 1.4 ಲಕ್ಷ ರೂಪಾಯಿ ಸಂಬಳ



















