ಬೆಂಗಳೂರು : ನೀವು ಧಾರವಾಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಧಾರವಾಡದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Dharwad Recruitment 2026) ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು
ಹುದ್ದೆ ಹೆಸರು: ಮೆಡಿಕಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆ: 15
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 30
7 ಮೆಡಿಕಲ್ ಆಫೀಸರ್, 2 ನರ್ಸಿಂಗ್ ಆಫೀಸರ್, 1 ಲ್ಯಾಬ್ ಟೆಕ್ನಿಶಿಯನ್ ಹಾಗೂ 5 ಹೆಲ್ತ್ ಇನ್ ಸ್ಪೆಕ್ಟಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎಸ್ಸಿ ಹಾಗೂ ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ಹಾಗೂ ಮೆರಿಟ್ ಲಿಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ dharwad.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!



















