ಉಡುಪಿ : ಕರ್ನಾಟಕ ಸರ್ಕಾರಿ ಸ್ವಾಮ್ಯದ, ಉಡುಪಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (DHFWO Udupi Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸ್ಪೀಚ್ ಥೆರಪಿಸ್ಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ಹಾಗೂ ಆಸಕ್ತಿ ಹೊಂದಿರುವವರು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಉಡುಪಿ ಜಿಲ್ಲೆಯವರಿಗೆ ತಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಉಡುಪಿ
ಹುದ್ದೆಗಳ ಹೆಸರು: ಸ್ಪೀಚ್ ಥೆರಪಿಸ್ಟ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 18
ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಆಡಿಯೋಲಜಿ ಆ್ಯಂಡ್ ಸ್ಪೀಚ್ ಲಾಂಗ್ವೇಜ್ ಪ್ಯಾಥೋಲಜಿಯಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ udupi.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಜಿಲ್ಲಾ ಸಾಂಕ್ರಾಮಿಕವಲ್ಲದ ರೋಗಗಳ ನಿಯಂತ್ರಣ ಘಟಕ (DNCDO),
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಉಡುಪಿ.
ಇದನ್ನೂ ಓದಿ : IPLನಲ್ಲಿ ವೈಫಲ್ಯಗಳ ನಡುವೆಯೂ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ



















