ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಉಡುಪಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (DHFWS Udupi Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ
ಹುದ್ದೆಗಳ ಹೆಸರು: ಕ್ಲಿನಿಕಲ್ ಸೈಕಾಲಜಿಸ್ಟ್ ಇತ್ಯಾದಿ
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 19
1 ಕ್ಲಿನಿಕಲ್ ಸೈಕಾಲಜಿಸ್ಟ್, 1 ಆಪ್ಟೊಮೆಟ್ರಿಸ್ಟ್ ಹಾಗೂ 1 ಸ್ಪೀಚ್ ಥೆರಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಉಡುಪಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ udupi.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the District Health and Family Welfare Officer, District Project Management Unit, NHM UDUPI 576101.
ಇದನ್ನೂ ಓದಿ : ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್ಮುಖ್ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!



















