ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಉಡುಪಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ (DHFWO Udupi Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಉಡುಪಿ
ಹುದ್ದೆಗಳ ಹೆಸರು: ನರ್ಸಿಂಗ್ ಆಫೀಸರ್
ಒಟ್ಟು ಹುದ್ದೆಗಳು: 08
ನೇಮಕಾತಿ ವಿಧಾನ: ನೇರ ಸಂದರ್ಶನ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 8
ಉಡುಪಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ udupi.nic.in ಗೆ ಭೇಟಿ ನೀಡಬೇಕು. ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ
District Health & Family Welfare Oflice, Udupi District, Karnataka Pin-576101.
ಇದನ್ನೂ ಓದಿ : ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?


















