ಬೆಂಗಳೂರು: ವಿಜಯಪುರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Vijayanagara Recruitment 2025) ಖಾಲಿ ಇರುವ ಎಂಟು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನರ್ಸಿಂಗ್ ಆಫೀಸರ್, ಜೂನಿಯರ್ ಲ್ಯಾಬೊರೇಟರಿ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಫ್ ಲೈನ್ ಹಾಗೂ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ..
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯನಗರ
ಹುದ್ದೆ ಹೆಸರು: ನರ್ಸಿಂಗ್ ಆಫೀಸರ್, ಜೂನಿಯರ್ ಲ್ಯಾಬೊರೇಟರಿ ಟೆಕ್ನಿಶಿಯನ್
ಒಟ್ಟು ಹುದ್ದೆ: 08
ಉದ್ಯೋಗ ಸ್ಥಳ: ವಿಜಯಪುರ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 18
ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 45 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 22 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ vijayanagara.nic.in ವೆಬ್ ಸೈಟ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ District Tuberculosis Education Officer’s Office, Vijayanagara ವಿಳಾಸಕ್ಕೆ ಕಳುಹಿಸಬೇಕು. ಇಲ್ಲವೇ, dtovijayanagara@gmail.com ವಿಳಾಸಕ್ಕೂ ಅರ್ಜಿ ಹಾಗೂ ದಾಖಲೆಗಳನ್ನು ಕಳುಹಿಸಬಹುದು.



















