ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ, ಯಾದಗಿರಿಯಲ್ಲಿರುವ ಡಿಸ್ಟ್ರಿಕ್ಟ್ ಹೆಲ್ತ್ ಸೊಸೈಟಿಯಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್ ನರ್ಸ್ ಹಾಗೂ ಲ್ಯಾಬೊರೇಟರಿ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 19 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಡಿಸ್ಟ್ರಿಕ್ಟ್ ಹೆಲ್ತ್ ಸೊಸೈಟಿ, ಯಾದಗಿರಿ
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 19
ಉದ್ಯೋಗ ಸ್ಥಳ ಯಾದಗಿರಿ
ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಬಿಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸ್ಟಾಫ್ ನರ್ಸ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 22 ಸಾವಿರ ರೂಪಾಯಿ ಹಾಗೂ ಲ್ಯಾಬೊರೇಟರಿ ಟೆಕ್ನಿಶಿಯನ್ ಆಫೀಸರ್ಸ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ yadgir.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ಸ್ಟಾಫ್ ನರ್ಸ್, ಲ್ಯಾಬೊರೇಟರಿ ಟೆಕ್ನಿಶಿಯನ್ ಆಫೀಸರ್ಸ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆಯನ್ನು ಓದಿದ ಬಳಿಕ ಅರ್ಜಿ ನಮೂನೆಯನ್ನು ಓಪನ್ ಮಾಡಬೇಕು
ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು