ಮೈತ್ರಿಯ ಎಲ್ಲ ನಾಯಕರೂ ಸೇರಿ ಪಾದಯಾತ್ರೆಗೆ ನಿರ್ಧರಿಸಿದ್ದರು. ಆದರೆ, ಪ್ರೀತಂಗೌಡ ಅವರನ್ನು ನೋಡಿದ್ದೇ ತಡ ಕುಮಾರಸ್ವಾಮಿ ಕೆಂಡಾಮಂಡಲವಾದರು. ಪಾದಾಯತ್ರೆಗೆ ನಮ್ಮ ಯಾವೊಬ್ಬ ಕಾರ್ಯಕರ್ತನೂ ಬರುವುದಿಲ್ಲ ಎಂದು ಹೇಳಿ ಗುಡುಗಿದರು. ನಂತರ ಅವರ ಮನವೊಲಿಸಲು ಹೈಕಮಾಂಡ್ ಯಶಸ್ವಿಯಾಗಿದ್ದು, ಇದನ್ನು ಕಂಡು ಡಿಸಿಎಂ ಡಿ.ಕೆ. ಶಿವಕುಮಾರ್ ಜೆಡಿಎಸ್ ಬಹುತೇಕ ಬಿಜೆಪಿಯೊಂದಿಗೆ ಲೀನವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನಾಳೆಯಿಂದ ನಡೆಯಲಿರುವ ಬಿಜೆಪಿ – ಜೆಡಿಎಸ್ ಜಂಟಿ ಪಾದಯಾತ್ರೆಯಲ್ಲಿ ಕುಮಾರಣ್ಮ ಹೆಜ್ಜೆ ಹಾಕಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆ ಸಾಗುವುದರಿಂದ ಜೆಡಿಎಸ್ ಭಾಗವಹಿಸುವುದು ಬಿಜೆಪಿಗೆ ಮುಖ್ಯವಾಗಿದೆ. ಜೆಡಿಎಸ್ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಡಿಸಿಎಂ ಡಿಕೆಶಿ ವ್ಯಂಗ್ಯವಾಡಿದ್ದಾರೆ. ಸದ್ಯದಲ್ಲೇ ಜಾತ್ಯಾತೀತ ಜನತಾದಳವು, ಬಿಜೆಪಿ ಜೊತೆ ವಿಲೀನಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿಯೇ ಆ ದಾಟಿಯಲ್ಲಿ ಮಾತನಾಡಿದ್ದಾರೆ.
ಡಿಕೆಶಿ, ಕುಮಾರಸ್ವಾಮಿಯವರು ಜೆಡಿಎಸ್ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಮಾಡುತ್ತಾರೆ ಎಂದು ನಾನು ಭಾವಿಸಿದ್ದೆ. ಪಾದಯಾತ್ರೆ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದವರು ಈಗ ಒಟ್ಟಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಮಾತು, ವಿಚಾರ ನೋಡಿದ್ದೇನೆ. ಬಿಜೆಪಿ ಜತೆ ಜೆಡಿಎಸ್ ಅನ್ನು ವಿಲೀನ ಮಾಡಿಕೊಂಡಿರಬೇಕು. ಹೀಗಾಗಿ ಬಿಜೆಪಿ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ನೆಲೆ ಇಲ್ಲ. ಹೀಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ನಾಳೆ ಪಾದಯಾದ್ರೆ ಉದ್ಘಾಟನೆ ಮಾಡುತ್ತೇನೆ ಎಂದಿದ್ದಾರೆ.