ಮಂಗಳೂರು: ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ (Diganth) ನಾಪತ್ತೆಯಾಗಿದ್ದ. ಈ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈಗ ದಿಗಂತ್ ಪೊಲೀಸರ (Police) ಮುಂದೆ ಅಸಲಿ ಕಾರಣ ಬಾಯಿ ಬಿಟ್ಟಿದ್ದಾನೆ. ದಿಗಂತ್, ದ್ಚಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಹೋಗಿದ್ದಾಗಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್ 10 ದಿನಗಳ ನಂತರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ.
ಮನೆಬಿಟ್ಟ ಊರೂರು ಸುತ್ತಿದ್ದ ದಿಂಗತ್
ನಾಪತ್ತೆಯಾದ ದಿನ ಮನೆಯ ಹತ್ತಿರದ ರೈಲ್ವೆ ಟ್ರ್ಯಾಕ್ ಬಳಿ ಹೋಗಿದ್ದ ದಿಗಂತ್, ಅಲ್ಲಿ ಚಪ್ಪಲಿ ಬಿಚ್ಚಿಟ್ಟು ಶೂ ಹಾಕಿಕೊಂಡಿದ್ದಾನೆ. ನಂತರ ಅಪರಿಚಿತರ ಬೈಕ್ಏರಿ ಮಂಗಳೂರಿಗೆ ಹೋಗಿದ್ದಾನೆ. ಮಂಗಳೂರಿನಿಂದ ಬಸ್ ಮೂಲಕ ಶಿವಮೊಗ್ಗಕ್ಕೆ ಹೋಗಿದ್ದಾನೆ. ಅಲ್ಲಿಂದ ಮೈಸೂರಿಗೆ ಹೋಗಿದ್ದಾನೆ. ಮೈಸೂರಿನಲ್ಲಿ ಟ್ರೈನ್ ಹತ್ತಿ ಬೆಂಗಳೂರಿಗೆ ಹೋಗಿದ್ದಾನೆ. ನಂದಿಬೆಟ್ಟಕ್ಕೆ ತೆರಳಿ, ಅಲ್ಲಿಯ ಹೊಟೇಲ್ ಒಂದರಲ್ಲಿ ಮೂರು ದಿನ ಕೆಲಸ ಮಾಡಿ 3 ಸಾವಿರ ರೂ. ಸಂಪಾದನೆ ಮಾಡಿದ್ದಾನೆ. ಆನಂತರ ಬೇರೆ ಬೇರೆ ಕಡೆ ಸುತ್ತಾಡಿ ಮಾರ್ಚ್ 8ರಂದು ಬೆಂಗಳೂರಿನಲ್ಲಿ ಮುರುಡೇಶ್ವರ ಎಕ್ಸ್‌ಪ್ರೆಸ್ ಟ್ರೈನ್ ಹತ್ತಿ ಉಡುಪಿಗೆ ತುಲುಪಿದ್ದಾನೆ.