ರಾಮನಗರ: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ (Bengaluru Central Jail) ಕಂಬಿಗಳ ಹಿಂದೆ ಕುಳಿತಿದ್ದಾರೆ.
ನಟ ದರ್ಶನ್ (Darshan) ಜೈಲು ಹಕ್ಕಿಯಾಗಿ ಸದ್ಯ ಒಂದು ತಿಂಗಳುಗಳೇ ಕಳೆದಿವೆ. ಆಪ್ತರು ಹಾಗೂ ಕುಟಂಬಸ್ಥರು ಭೇಟಿಯಾಗಿ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನಟ ದರ್ಶನ ಅವರ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾತನಾಡಿದ್ದು, ಅಭಿಮಾನಿಗಳು ಸಂತಸ ಪಟ್ಟಿದ್ದಾರೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ. ಹೀಗಾಗಿ ಜುಲೈ 24ರಂದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳು ಡಿ ಬಾಸ್..ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ.
ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆದ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲಾ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ ಎಂದು ಹೇಳಿದರು.
ಗೆಳತಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದಾರೆಂಬ ಕಾರಣಕ್ಕೆ ನಟ ದರ್ಶನ ಹಾಗೂ ಗ್ಯಾಂಗ್ ಹಲ್ಲೆ ಮಾಡಿ ಕೊಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಗೌಡ, ನಟ ದರ್ಶನ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.