ಬೆಂಗಳೂರು: ದೇಶಾದ್ಯಂತ ಯಾವುದೇ ಹಣಕಾಸು ಹಗರಣಗಳನ್ನು ಬಯಲಿಗೆಳೆಯುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಜಾರಿ ನಿರ್ದೇಶನಾಲಯದಲ್ಲಿ ಖಾಲಿ ಇರುವ (Directorate of Enforcement Legal Consultants Recruitment 2025) 75 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಾರಿ ನಿರ್ದೇಶನಾಲಯ
ಹುದ್ದೆ ಹೆಸರು: ಲೀಗಲ್ ಕನ್ಸಲ್ಟಂಟ್
ಒಟ್ಟು ಹುದ್ದೆ: 75
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 31

ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಲ್ ಎಲ್ ಬಿ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಐಐಎಂಬಿ ಅಧಿಸೂಚನೆಯಲ್ಲಿ ತಿಳಿಸಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 80 ಸಾವಿರ ರೂಪಾಯಿ ಸಂಬಳದ ಪ್ಯಾಕೇಜ್ ಇರಲಿದೆ. 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ https://enforcementdirectorate.gov.in/ ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ddlegal-ed@gov.in ಗೆ ಕಳುಹಿಸಬೇಕು
ಇದನ್ನೂ ಓದಿ: ಭಾರತೀಯ ವಾಯುಪಡೆಯಲ್ಲಿ 340 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ


















