ಬೆಂಗಳೂರು : ಕರ್ನಾಟಕದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ಕಿತ್ತಾಟಕ್ಕೆ ಸದ್ಯ ಬ್ರೇಕ್ ಬಿದ್ದಂತೆ ಕಾಣುತ್ತಿದೆ. ಇದೀಗ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಡಿಕೆ ಶಿವಕುಮಾರ್ ಬಣದ ಶಾಸಕರು ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹೈಕಮಾಂಡ್ ನಾಯಕರು ಸೊಪ್ಪು ಹಾಕದಿರುವುದರಿಂದ ಡಿಕೆಶಿ ಬಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಬರಿಗೈನಲ್ಲಿ ನಿರಾಸೆಯಿಂದ ಬೆಂಗಳೂರಿಗೆ ಆಗಮಿಸಿದೆ. ಹೀಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವಿನ ಕುರ್ಚಿ ಕದನ ಸೈಲೆಂಟ್ ಆಯ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಮೊನ್ನೆ ಮೊನ್ನೆಯಷ್ಟೇ ಡಿಕೆ ಬೆಂಬಲಿತ ಶಾಸಕರ ಒಂದು ಗುಂಪು ದೆಹಲಿಗೆ ಹೋಗಿ ತೆರಳಿತ್ತು. ಬಳಿಕ ನಿನ್ನೆ ತಡರಾತ್ರಿ 6 ಶಾಸಕರ 2ನೇ ಟೀಂ ದೆಹಲಿಗೆ ತೆರಳಿತ್ತು. ಮಾಗಡಿ ಶಾಸಕ H.C ಬಾಲಕೃಷ್ಣ, ಕದಲೂರು ಉದಯ್, ಶಿವಗಂಗಾ ಬಸವರಾಜ್, ಇಕ್ಬಾಲ್ ಹುಸೇನ್, ಶಾಸಕಿ ನಯನ ಮೋಟಮ್ಮ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಇರುವ 2ನೇ ಟೀಂ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಕಸರತ್ತು ನಡೆಸಿತ್ತು. ಆದ್ರೆ, ಹೈಕಮಾಂಡ್ ನಾಯಕರು ಸಿಗದಿದ್ದರಿಂದ ಡಿಕೆ ಬಣ ನಿರಾಸೆಯಿಂದ ಬೆಂಗಳೂರಿಗೆ ವಾಪಸ್ ಆಗಿದೆ.
ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರಿಗೆ ಸಿಕ್ಕ ರಾಹುಲ್ ಗಾಂಧಿ ಡಿಕೆ ಶಿವಕುಮಾರ್ ಬಣಕ್ಕೆ ಸಿಕ್ಕಿಲ್ಲ. ಇನ್ನು ಇಂದು (ನವೆಂಬರ್ 25) ಸಚಿವ ಪ್ರಿಯಾಂಕ್ ಖರ್ಗೆ ಅವರ ಭೇಟಿಗೂ ರಾಹುಲ್ ಗಾಂಧಿ ಸಮಯ ಕೊಟ್ಟಿದ್ದಾರೆ. ಆದ್ರೆ, ಡಿಕೆ ಬಣದ ಶಾಸಕರ ಭೇಟಿಗೆ ರಾಹುಲ್ ಗಾಂಧಿ ಸಯಮ ಕೊಟ್ಟಿಲ್ಲ. ಇದರಿಂದ ಡಿಕೆ ಬಣ ಬರಿಗೈನಲ್ಲೇ ವಾಪಸ್ ಆಗಿದ್ದಾರೆ.
ಇದನ್ನೂ ಓದಿ : ಉಡುಪಿ | ಪ್ರಧಾನಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ.. ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್, SPG ತಂಡದಿಂದ ಸ್ಥಳ ಪರಿಶೀಲನೆ



















