ನಟ ದರ್ಶನ್ ಅವರಿಗೆ ವಿಪರೀತವಾಗಿ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದಾಗಿ ಶಸ್ತ್ರ ಚಿಕಿತ್ಸೆಯ ಸಲಹೆಯನ್ನು ವೈದ್ಯರು ನೀಡಿದ್ದರು. ಹೀಗಾಗಿ ದರ್ಶನ್ ಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆನಂತರ ದರ್ಶನ್ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ, ಶಸ್ತ್ರ ಚಿಕಿತ್ಸೆ ಮಾತ್ರ ಮಾಡಿಸಿಕೊಂಡಿರಲಿಲ್ಲ. ಈ ಮಧ್ಯೆ ದರ್ಶನ್ ಗೆ ಜಾಮೀನು ಸಿಕ್ಕಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗುತ್ತಿದೆ.
ದರ್ಶನ್, ಕಳೆದ ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಾಮೀನು ಸಿಗುತ್ತಿದ್ದಂತೆ ಅವರು ಸಂಪೂರ್ಣವಾಗಿ ಗುಣಮುಖರಾದಂತೆ ಕಾಣಿಸುತ್ತಿದೆ. ಆರಾಮಾಗಿಯೇ ನಡೆದು ಈಗ ಆಸ್ಪತ್ರೆಯಿಂದ ಕೋರ್ಟ್ ಗೆ ಹಾಜರಾಗಲು ತೆರಳಿದ್ದಾರೆ. ಆದರೆ, ಇದಕ್ಕೆ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದ್ದು ಚರ್ಚೆಗಳು ಶುರುವಾಗಿವೆ.
ದರ್ಶನ್ ಜೈಲಿನಲ್ಲಿದ್ದಾಗ ಬೆನ್ನು ನೋವಿನಿಂದ ಒದ್ದಾಡುತ್ತಿದ್ದರು. ಈ ವೇಳೆ ವೈದ್ಯರು, ಶಸ್ತ್ರ ಚಿಕಿತ್ಸೆ ಮಾಡಿಸದಿದ್ದರೆ ಪಾರ್ಶ್ವವಾಯು ಆಗುತ್ತದೆ ಎಂದಿದ್ದರು. ಹೀಗಾಗಿ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ, ಒಂದೂವರೆ ತಿಂಗಳು ಆಸ್ಪತ್ರೆಯಲ್ಲಿ ಕಳೆದರೂ ಶಸ್ತ್ರ ಚಿಕಿತ್ಸೆ ಮಾತ್ರ ನಡೆದಿರಲಿಲ್ಲ. ‘ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಆದರೆ, ಈಗ ಜಾಮೀನು ಸಿಕ್ಕಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಆರಾಮಾಗಿ ನಡೆಯುತ್ತಿದ್ದಾರೆ. ಇದನ್ನು ಕಂಡು ಎಲ್ಲರೂ ಅಚ್ಚರಿ ಪಡುತ್ತಿದ್ದಾರೆ.
ಡಿ. 16ರಂದು ಕೆಂಗೇರಿಯಲ್ಲಿನ ಬಿಜಿಎಸ್ ಆಸ್ಪತ್ರೆಗೆ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಆಪ್ತ ಧನ್ವಿರ್ ಬಂದಿದ್ದರು. ಆನಂತರ ದರ್ಶನ್ ಕಾರಿನಲ್ಲಿ ತೆರಳಿದ್ದಾರೆ.
ಆದರೆ, ಕೋರ್ಟ್ ನಿಂದ ದರ್ಶನ್ ಮರಳಿ ಮನಗೆ ಹೋಗುತ್ತಾರಾ? ಅಥವಾ ಆಸ್ಪತ್ರೆಗೆ ಹೋಗುತ್ತಾರಾ? ನೋಡಬೇಕಿದೆ.