ಶಿವಮೊಗ್ಗ: ಕಾಂಗ್ರೆಸ್ ನಲ್ಲಿ ಅಸಮಾಧಾನ ಹೆಚ್ಚಾಗಿದೆ. ಹೀಗಾಗಿ ಕುದುರೆ ವ್ಯಾಪಾರ ಶುರುವಾಗಿದೆ. ಬಿಜೆಪಿಗೆ ಇದರಲ್ಲಿ ಯಾವ ಆಸಕ್ತಿಯೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ಶಾಸಕರಕನ್ನು ದುಡ್ಡು ಕೊಟ್ಟು ಖರೀದಿ ಮಾಡಬಹುದು ಅಂತ ಕಾಂಗ್ರೆಸ್‌ನಲ್ಲಿ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್ ನಲ್ಲೇ ಸಾಕಷ್ಟು ಗೊಂದಲಗಳು ಇವೆ. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ದಿನ ಹತ್ತಿರ ಬಂದಿವೆ. ಹೀಗಾಗಿ ಇದನ್ನು ತಪ್ಪಿಸಲು ಸುಳ್ಳು ಆರೋಪಗಳನ್ನು ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವವರ ಮೇಲೆ ಬರೆ ಎಳೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. 15 ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ ಹಾಗೂ ಗ್ಯಾರಂಟಿಗೆ ಹಣ ಕ್ರೋಢೀಕರಿಸಲು ಆಗುತ್ತಿಲ್ಲ. ಹೀಗಾಗಿ ಬಡವರ ಮೇಲೆ ಬರೆ ಎಳೆದು ಗದಾ ಪ್ರಹಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮುಡಾ ಹಗರಣದ ಕುರಿತು ನಿಷ್ಪಕ್ಷವಾಗಿ ತನಿಖೆ ಆಗಬೇಕು. ಸಿಎಂ ಹಾಗೂ ಸರ್ಕಾರದ ಹಣೆಬರಹ ರಾಜ್ಯದ ಜನರಿಗೆ ಗೊತ್ತಾಗಿದೆ. ರೈತರ ಭೂಮಿಯನ್ನು ವಕ್ಫ್ ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದಿದ್ದಾರೆ.